ವಿಜಯಪುರ ಜಿಲ್ಲೆಯ ದೇವರನಾವದಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಸಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಭೇಟಿ ನೀಡಿ ಪರಿಶೀಲಿಸಿದರು. ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ಅಲ್ಲಿನ ಸಂತ್ರಸ್ಥರೊಂದಿಗೆ ಮಾತನಾಡಿದರು...