ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಈ ಯೋಜನೆಯಡಿ 92 ಉದ್ದಿಮೆದಾರರಿಗೆ ಸಾಲ ಮಂಜೂರು ಮಾಡಲಾಗಿದೆ. ರಾಜ್ಯದಲ್ಲಿ 5 ಸಾವಿರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಸ್ಥಾಪಿಸುವ ಉದ್ದೇಶದಿಂದ 206 ಕೋಟಿ ಅನುದಾನ ಒದಗಿಸಲಾಗಿದೆ. ಕೊಡಗಿನಲ್ಲಿ 75 ಉದ್ದಿಮೆಗಳ ಸ್ಥಾಪನೆಯ ಗುರಿ ಹೊಂದಲಾಗಿದೆ. ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ವಿವಿಧ ಪಾಲುದಾರರಿಗೆ ಮಡಿಕೇರಿಯಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಜಿಲ್ಲಾಡಳಿತ, ಜಿ.ಪಂ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ನಡೆದ ಅರಿವು ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೆಂಕಟ್‌ರಾಜ್ ಉದ್ಘಾಟಿಸಿ ಮಾತನಾಡಿ