ಮಾಗಡಿ ತಾಲೂಕಿನ ವೀರಶೈವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಸತತವಾಗಿ ಐದನೇ ಬಾರಿಗೆ ಅವಿರೋಧವಾಗಿ ಶಿವರುದ್ರಯ್ಯ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಭಾನುವಾರ ನಡೆದ ಚುನಾವಣೆಯಲ್ಲಿ ಶಿವರುದ್ರಯ್ಯ ವರೆತು ಪಡಿಸಿ ಬೇರೆ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಕೆ ಮಾಡಿರಲಿಲ್ಲ. ಉಪಾಧ್ಯಕ್ಷರಾಗಿ ಶಿವಪ್ರಸಾದ್ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಉಪಾಧ್ಯಕ್ಷರನ್ನ ನಿರ್ದೇಶಕರು ಹಾಗೂ ಸಮುದಾಯದ ಮುಖಂಡರು ಅಭಿನಂದಿಸಿದರು.