ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದ ಲಕ್ಕಮ್ಮದೇವಿ ಜಾತ್ರಾ ಮಹೋತ್ಸವಕ್ಕೆ ಗುರುವಾರ ಸಾಯಂಕಾಲ 4ಗಂಟೆ ಸುಮಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ, ಪ್ರತಿ ವರ್ಷ ಜಾತ್ರಾ ಮಹೋತ್ಸವದಲ್ಲಿ ನಾನು ರಾಜಕೀಯ ಪ್ರಯುಕ್ತ ಎಲ್ಲೆ ಇದ್ದರೂ ಸಹ ಜಾತ್ರೆಯಲ್ಲಿ ಭಾಗಿಯಾಗುತ್ತಾ ಬಂದಿದ್ದೇನೆ ಎಂದು ಹೇಳಿದರು. ಜಾತ್ರಾ ಮಹೋತ್ಸವದಲ್ಲಿ ಮಠಾಧೀಶರು ಭಕ್ತಾದಿಗಳು ಸಾರ್ವಜನಿಕರು ಜನಪ್ರತಿನಿಧಿಗಳು ಭಾಗಿಯಾಗಿದ್ದರು.