ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜೊತೆ ತಾವು ಸಿನಿಮಾ ಮಾಡುವುದಾಗಿ ಖ್ಯಾತ ನಿರ್ದೇಶಕ ಜೋಗಿ ಪ್ರೇಮ್ ಘೋಷಣೆ ಮಾಡಿದ್ದಾರೆ. ಬುಧವಾರ ಮಧ್ಯಾಹ್ನ ಮಲ್ಲೇಶ್ವರಂನ ರೇಣುಕಾಂಬಾ ಸ್ಟುಡಿಯೋದಲ್ಲಿ ಮಾತನಾಡಿರುವ ಅವರು, ಧ್ರುವ ಸರ್ಜಾ ಅಭಿನಯದ ಕೆಡಿ ಚಿತ್ರ ಬಿಡುಗಡೆಗೆ ಸಿದ್ಧವಾಗಿರುವಂತೆಯೇ ತಮ್ಮ ಮುಂದಿನ ಪ್ರಾಜೆಕ್ಟ್ ಕುರಿತು ಮಾಹಿತಿ ನೀಡಿದರು. ನಟ ದರ್ಶನ್ ಜೊತೆ ಸಿನಿಮಾ ಮಾಡುವುದಾಗಿ ಮತ್ತೆ ಸ್ಪಷ್ಟಪಡಿಸಿದ್ದಾರೆ.