Download Now Banner

This browser does not support the video element.

ಕಂಪ್ಲಿ: ನಗರದಲ್ಲಿ ಮಳೆರಾಯನ ಆರ್ಭಟ, ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಮರ ಬಿದ್ದು ವಿದ್ಯುತ್ ವ್ಯತ್ಯಯ

Kampli, Ballari | Sep 11, 2025
ನಗರದಲ್ಲಿ ನಿನ್ನೆ ರಾತ್ರಿ ಸುರಿದ ಗಾಳಿ-ಮಳೆಯಿಂದಾಗಿ ಇಂದು ಬೆಳಿಗ್ಗೆ ದೊಡ್ಡ ಅವಘಡ ಸಂಭವಿಸಿದೆ.ಸೆಪ್ಟೆಂಬರ್ 11, ಗುರುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ತಾಲೂಕು ಕಚೇರಿ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಆಕಸ್ಮಿಕವಾಗಿ ಮುರಿದು ಬಿದ್ದಿದೆ.ಬಿದ್ದ ಮರವು ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ, ಆ ಪ್ರದೇಶದಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.ಘಟನಾ ಸ್ಥಳಕ್ಕೆ ವಿದ್ಯುತ್ ಇಲಾಖೆ ಹಾಗೂ ಪುರಸಭೆ ಸಿಬ್ಬಂದಿ ಭೇಟಿ ನೀಡಿ, ಮರ ತೆರವುಗೊಳಿಸುವ ಹಾಗೂ ವಿದ್ಯುತ್ ಸರಬರಾಜು ಪುನರಾರಂಭಿಸಲು ಕಾರ್ಯಾಚರಣೆ ಕೈಗೊಂಡಿದ್ದಾರೆ.
Read More News
T & CPrivacy PolicyContact Us