ಹಾಸನಕ್ಕೆ ತೆರಳುವ ಮಾರ್ಗದ ನಡುವೆಯೂ ಕಾರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ, ಇಂದು ಹಾಸನಕ್ಕೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಮಾರ್ಗ ಮಧ್ಯೆ ಕಾರಿನಲ್ಲಿ ರಾಜ್ಯಾದ್ಯಂತ ಮಳೆ-ಬೆಳೆಹಾನಿ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳು, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಕೃಷ್ಣ ಬೈರೇಗೌಡ ಅವರ ಈ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.