ಧರ್ಮಸ್ಥಳದಲ್ಲಿ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೂಪಿಸಿರುವ ಹಿಂದೂ ಸಂಘಟನೆಗಳ ಮುಖಂಡರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ ಭಾನುವಾರ ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರಿಗೆ ಜಯಗೋಷಗಳನ್ನು ಹಾಕುತ್ತಾ ಅಪಪ್ರಚಾರ ನಡೆಸುತ್ತಿರುವವರಿಗೆ ತಕ್ಕ ಶಿಕ್ಷೆ ಆಗಲಿದೆ ಎಂದು ಎಚ್ಚರಿಕೆಯನ್ನು ಕೊಟ್ಟರು.