ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಎಚ್.ಡಿ. ಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಏಜಾಜ್ ಪಾಷ ಒತ್ತಾಯಿಸಿದರು. ಪಟ್ಟಣದ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿ, ಎರಡನೇ ಬಾರಿ ಹೆಚ್ಚು ಮತಗಳ ಅಂತರದಿಂದ ಗೆದ್ದು ಹಿಂದುಳಿದ ತಾಲೂಕು ಎಂಬ ಹಣಪಟ್ಟಿ ಕಳಚಲು ಕ್ಷೇತ್ರಾದ್ಯಂತ ಸುತ್ತಾಡಿ ಜನರ ಸಮಸ್ಯೆಗಳು, ದು:ಖ ದುಮ್ಮಾನಕ್ಕೆ ಸ್ಪಂದಿಸುತ್ತಿರುವ ಅನಿಲ್ ಚಿಕ್ಕಮಾದು ಅವರು ವಿಧಾನಸಭೆಯಲ್ಲೂ ಕ್ಷೇತ್ರೆ ಕಾಡಂಚಿನ ಜನರ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.