ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಧರಣಿ ನಿರತ ಸ್ಥಳಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ್ ಅವರೊಂದಿಗೆ ಚರ್ಚಿಸಿ ನಿಮಗೂ ಮತ್ತು ಸುರಪುರದ ಯಾರೊಬ್ಬರಿಗೂ ತೊಂದರೆಯಾಗದAತೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಭರವಸೆ ನೀಡಿದರು. ಇಲ್ಲಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವೃತ್ತದ ಹೆಚ್ಚಿನ ಅಭಿವೃದ್ದಿಗಾಗಿ ಅವಶ್ಯವಿರುವ ಸರಕಾರಿ ಭೂಮಿ ಮಂಜೂರಾತಿಗಾಗಿ ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಭೂಮಿ ಮಂಜೂರಾತಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ನಿರಂತರ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಅವರು ಮಾತನಾಡಿದರು.