ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಎಬ್ಬಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಪಕ್ಷ ಹಾಗೂ ಹಿಂದೂ ಪರ ಸಂಘಟನೆಗಳ ಮುಖಂಡರಿಂದ ಶಹಪುರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸೋಮವಾರ ಮಧ್ಯಾಹ್ನ ನಡೆದ ಭಾಗವಹಿಸಿದ ಅನೇಕ ಮುಖಂಡರು ಮಾತನಾಡಿ, ಧರ್ಮಸ್ಥಳದ ಕುರಿತು ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಈಗ ಬುರುಡೆಯ ಕುರಿತು ಷಡ್ಯಂತ್ರ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ನಂತರ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಬರೆದ ಮನವಿ ತಹಸಿಲ್ದಾರ್ ಮೂಲಕ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿಯ ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಯಾಳಗಿ ಜಿಲ್ಲಾ ಉಪಾಧ್ಯಕ್ಷ ದೇವೇಂದ್ರಪ್ಪ ಕೊನೇರ ಸೇರಿದಂತೆ ನೂರಾರು ಜನರಿದ್ದರು.