ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಹತ್ತಿ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಹಿನ್ನಲೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶಾಸಕ ಎಚ್.ಎಂ.ಗಣೇಶಪ್ರಸಾದ್ ಮಾತನಾಡಿ, ಕಳೆದ ವರ್ಷ 6 ಕೋಟಿ ವೆಚ್ಚದಲ್ಲಿ ಸಚಿವ ಶಿವಾನಂದ ಪಾಟೀಲ್ ಹತ್ತಿ ಮಾರುಕಟ್ಟೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದ್ದರು. ಇದೀಗ ಮಾರುಕಟ್ಟೆ ಕೆಲಸ ಪೂರ್ಣಗೊಂಡಿದ್ದು, ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 475 ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಜೊತೆಗೆ 6 ಕೋಟಿ ವೆಚ್ಚದಲ್ಲಿ ಹತ್ತಿ ಮಾರುಕಟ್ಟೆ ಕಾಮಗಾರಿ ಪೂರ್ಣಗೊಂಡಿದೆ ಎಂದರು.