ಕುಮಟಾ : ತಾಲೂಕಿನ ಗುಡಿಗಾರ್ ಗಲ್ಲಿಯಲ್ಲಿರುವ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗಣೇಶ ಮಂಡಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್. ಎಂ ಅವರು ಶುಕ್ರವಾರ ಸಂಜೆ 5:00 ಗಂಟೆ ಸುಮಾರಿಗೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆಯನ್ನು ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್.ಎಂ ಅವರು ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಭಕ್ತಿ ಪ್ರಧಾನವಾಗಿ ಶ್ರೀ ಗಣೇಶನ ವಿಸರ್ಜನೆ ಮಾಡಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡದಂತೆ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಕರೆ ನೀಡಿದರು.