ರಾಯಚೂರು ಜಿಲ್ಲೆಯ ಸಿಂಧನೂರು ನಗರದ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಇವರ ನೇತೃತ್ವದಲ್ಲಿ ಕುಡಿಯುವ ನೀರಿನ ಸಭೆ ಜರುಗಿತು. ಈ ಸಭೆಯಲ್ಲಿ ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ್ ಹಾಗೂ ತಹಶೀಲ್ದಾರ್ ಅರುಣ್ ಎಚ್ ದೇಸಾಯಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ತದನಂತರ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಕೆರೆಗಳನ್ನು ವೀಕ್ಷಣೆಯನ್ನು ಮಾಡಿ ಕೆರೆಗೆ ನೀರು ತುಂಬಿಸುವ ಕೆಲಸ ಮಾಡಬೇಕು ಒಂದು ವೇಳೆ ಕುಡಿಯುವ ನೀರಿನ ಸಮಸ್ಯೆ ಆದರೆ ನೀವೇ ನೇರವಾಗಿ ತೀರಿ ಎಂದು ಖಡಕ್ ಸೂಚನೆ ನೀಡಿದರು