ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಾರ್ ಎಚ್ -3 ಕ್ಯಾಂಪ್ ನಲ್ಲಿ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿವೈಎಸ್ಪಿ ಬಿ ಎಸ್ ತಳವಾರ ಭಾಗವಹಿಸಿ ಎಲ್ಲರೂ ಶಾಂತಿ ಸೌಹಾರ್ದದಿಂದ ಹಬ್ಬ ಆಚರಿಸಬೇಕು ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದಂತೆ ಹಬ್ಬವನ್ನು ಆಚರಿಸುವಂತೆ ತಿಳಿಸಿದರು. ಯಾರಾದರೂ ಶಾಂತಿಗೆ ಭಂಗ ಉಂಟು ಮಾಡಿದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದರು. ಕ್ಯಾಂಪ್‌ನ ನೂರಾರು ಜನ ಭಾಗವಹಿಸಿದ್ದರು.