ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಯೋಗ ಶಾಲೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಶಾಸಕ ಪುಟ್ಟರಂಗಶೆಟ್ಟಿ ಮಾತನಾಡಿ ಕಾಲೇಜು ಕಟ್ಟಡ ನಿರ್ಮಾಣಕ್ಕೆ 8.5 ಕೋಟಿ ಮಂಜೂರಾಗಿದ್ದು ಟೆಂಡರ್ ಆಗಿದೆ ನನ್ನ ಸಿಎಸ್ಆರ್ ನಿಧಿಯಿಂದ ಕಾಲೇಜಿನಲ್ಲಿ ಮೂಲ ಸೌಕರ್ಯ ಒದಗಿಸಲು ಅನುದಾನ ನೀಡುತ್ತೇನೆ ಜಿಲ್ಲೆಯಲ್ಲಿ ಸಾಕಷ್ಟು ಶಿಕ್ಷಣ ಸಂಸ್ಥೆಗಳಿದ್ದು ಹಾಸ್ಟೆಲ್ ಗಳ ನಿರ್ಮಾಣಕ್ಕೂ ಕ್ರಮವಹಿಸಲಾಗಿದೆ ಎಂದು ತಿಳಿಸಿದರು