ಒಳ ಮೀಸಲಾತಿ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ದಲಿತ ಮುಖಂಡರು ಸಂಭ್ರಮಾಚರಣೆ ಮಾಡಿದ್ದಾರೆ. ನಗರಸಭೆ ಆವರಣದಲ್ಲಿ ಇರುವ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ದಲಿತ ಮುಖಂಡರು ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ದಲಿತ ಪರ ನಾಯಕ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಅಂತ ಜಯ ಘೋಷಗಳನ್ನು ಹಾಕಿದ್ದಾರೆ.