ಮತಗಳ್ಳತನ ವಿರುದ್ದ ಜಿಲ್ಲಾ ಯುವ ಕಾಂಗ್ರೆಸ್ ನಿಂದಸೆ.೭ ರಂದು ಭಾನುವಾರ ಪಂಜಿನ ಮೆರವಣಿಗೆ, ಕೋಲಾರ: ದೇಶದಲ್ಲಿ ನಡೆಯುತ್ತಿರುವ ಮತಗಳ್ಳತನ ವಿರುದ್ಧ ಜನಜಾಗೃತಿ ಮೂಡಿಸುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಬೆಂಬಲವಾಗಿ ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ನೇತೃತ್ವದಲ್ಲಿ ಸೆ.೭ ರಂದು ಭಾನುವಾರ ಸಂಜೆ ನಗರದಲ್ಲಿ ೬ ಗಂಟೆಗೆ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸೈಯದ್ ಆಫ್ರಿದ್ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಮತಗಳ್ಳತನದ ಮೂಲಕ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿರುವ ಎನ್ಡಿಎ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ನೈತಿಕ ಹಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಕೇಂದ್ರ ಸರ್ಕಾರ