ನಾಗಮಂಗಲ ಪಟ್ಟಣದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಶಾಂತಿ ಕಾಪಾಡುವ ದೃಷ್ಠಿಯಿಂದ ಪೊಲೀಸ್ ಭದ್ರತೆಯನ್ನು ನಿಯೋಜಿಸಿರುವ ಹಿನ್ನೆಲೆಯಲ್ಲಿ ಪೊಲೀಸರ ಪಥ ಸಂಚಲನ ನಡೆಯಿತು. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯು ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಾಗಮಂಗಲ ಪಟ್ಟಣದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ ಭಾನುವಾರ ಸಂಜೆ 5 ಗಂಟೆಯಲ್ಲಿ ಪಥ ಸಂಚಲನ ನಡೆಯಿತು. ಈ ಪಥ ಸಂಚಲನದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.