ಜಿಲ್ಲಾಡಳಿತ ಭವನದ ಆಡಿಟೋರಿಯಂ ನಲ್ಲಿ ಪಂಚ ಗ್ಯಾರಂಟಿಗಳ ಯೋಜನೆ ಅನುಷ್ಠಾನ ಕುರಿತು ಕಾರ್ಯಾಗಾರವನ್ನು ಸೆಪ್ಟೆಂಬರ್ 3 ಬುಧವಾರದಂದು ಏರ್ಪಡಿಸಲಾಗಿದೆ ಕಾರ್ಯಾಗಾರದ ವೇದಿಕೆಗಳಲ್ಲಿ ಫಲಾನುಭವಿಗಳ ಅನುಭವ,ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಯಲುವಳ್ಳಿ ಎನ್ ರಮೇಶ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು