ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 29 ರ ಶುಕ್ರವಾರ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಒಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾರೆ. ಈ ಘಟಬೆ ತಡವಾಗಿ ಬೆಳಕಿಗೆ ಬಂದಿದ್ದು, ಇದೇ ಗ್ರಾಮದ ನರಸಿಂಹ ( 33 ) ಮೃತಪಟ್ಟ ವ್ಯಕ್ತಿ. ಗ್ರಾಮಸ್ಥರು ಸೇರಿಕೊಂಡು ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು. ಮೂರನೇ ದಿನದ ವಿಸರ್ಜನೆ ನಿಮಿತ್ತ ಮಳೆಯಲ್ಲೇ ಮೆರವಣಿಗೆಯೊಂದಿಗೆ ಕಾಲುವೆಗೆ ತೆರಳುವ ವೇಳೆ ವಿದ್ಯುತ್ ತಂತಿಗೆ ಗಣೇಶ ಮೂರ್ತಿ ತಗುಲಿದ್ದರಿಂದ ಪಕ್ಕದಲ್ಲೇ ಇದ್ದ ನರಸಿಂಹ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.