ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸರ್ವಪಲ್ಲಿ ರಾಧಾಕೃಷ್ಣ ಅವರ ಜಯಂತಿ ಕಾರ್ಯಕ್ರಮವನ್ನು ಶುಕ್ರವಾರ ಸಾಯಂಕಾಲ 5ಗಂಟೆ ಸುಮಾರಿಗೆ ಶಾಸಕ ಅಪ್ಪಾಜಿ ನಾಡಗೌಡ ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಸರ್ವಪಲ್ಲಿ ರಾಧಾಕೃಷ್ಣ ಅವರು ತಮ್ಮ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಮಾಡಿದವರು. ಶಿಕ್ಷಕ ವೃತ್ತಿ ಜಗತ್ತಿನಲ್ಲಿಯೇ ಶ್ರೇಷ್ಠವಾದ ವೃತ್ತಿ ಎಂದು ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಶಿಕ್ಷಕರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.