ಚಾಮರಾಜನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಯವಜನೋತ್ಸವ ಕಾರ್ಯಕ್ರಮದ ಅಂಗವಾಗಿ ಹೆಚ್ ಐವಿ ಏಡ್ಸ್ ನಿಯಂತ್ರಣ ಕಾರ್ಯಕ್ರಮದಡಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಡಿಎಚ್ಒ ಚಿದಂಬರ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಜಿಲ್ಲಾಡಳಿತ ಭವನದಿಂದ ಹೊರಟ ಬೈಕ್ ರ್ಯಾಲಿ ಬಿ.ರಾಚಯ್ಯ ಜೋಡಿ ರಸ್ತೆ, ಭುವನೇಶ್ವರಿ ವೃತ್ತ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಅರಣ್ಯ ಇಲಾಖೆಯ ವೃತ್ತ, ಗುಂಡ್ಲುಪೇಟೆ ವೃತ್ತದಿಂದ ಮೆಡಿಕಲ್ ಕಾಲೇಜು ವರೆಗೆ ನಡೆಯಿತು