ಬೈಕೊಂದಕ್ಕೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಹನೂರು ತಾಲೂಕಿನ ಮಲ್ಲಯ್ಯನಪುರ ಸಮೀಪ ನಡೆದಿದೆ. ಪಾಂಡವಪುರದ ಸ್ವರೂಪ್ ಎಂಬವನಿಗೆ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ತಮಿಳುನಾಡಿನ ಮಾದಪ್ಪನ್ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಇಬ್ಬರೂ ಗಾಯಾಳುಗಳನ್ನು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಪ್ರಕರಣ ನಡೆದಿದೆ.