ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಗ್ಗೆ ಅವಹೇಳನ ಕಾರಿ ಹೇಳಿಕೆ ನೀಡಿರುವ ಕುರಿತು ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆ.21 ರಂದು ಉಜಿರೆ ನಿವಾಸದಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬ್ರಹ್ಮಾವರ ಪೊಲೀಸರು ಆ.22 ರಂದು ಪ್ರಕರಣ ದಾಖಲಿಸಿದ್ದರು.