ರಾಯಚೂರ ಜಿಲ್ಲೆಯ ಸಿಂಧನೂರ ಪಟ್ಟಣದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗಣಪತಿ ವಿಸರ್ಜನೆ ಕಾರ್ಯಕ್ರಮ ಆರಂಭಿಸಲಾಗಿದೆ. 11 ದಿನಗಳ ಕಾಲ ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿಯ ವಿಸರ್ಜನೆಯ ಅಂಗವಾಗಿ ಅದ್ದೂರಿ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಮಧ್ಯಾಹ್ನ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಯ ಮುಖಂಡರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿ ಕುಣಿದು ಕುಪ್ಪಳಿಸುತ್ತಿದ್ದಾರೆ. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯುತ್ತಿದ್ದುದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ