ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಅರಕೇರಿ ಗ್ರಾಮದ ಮುರಾರ್ಜಿ ದೇಸಾಯಿ ಶಾಲೆಯ ನೂತನ ಕೊಠಡಿ ಕಾಮಗಾರಿ ಭೂಮಿ ಪೂಜೆಯನ್ನು ಭಾನುವಾರ ಸಾಯಂಕಾಲ 5ಗಂಟೆ ಸುಮಾರಿಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ 2028ರ ಒಳಗಾಗಿ ಜಿಲ್ಲೆಯ ಎಲ್ಲಾ ಶಾಲೆಗಳನ್ನು ಪುನಶ್ಚೇತನ ಮಾಡುವ ಗುರಿ ಹೊಂದಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.