ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದಲ್ಲಿ ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಗ್ರಾಮದ ಹೊರವಲಯದ ಮನೆಯೊಂದರಲ್ಲಿ ವೃದ್ಧಿ ದಂಪತಿಗಳು ವಾಸವಿದ್ದು, ಶನಿವಾರ ರಾತ್ರಿ 7.30ರ ಸುಮಾರಿಗೆ ಮನೆಗೆ ನುಗ್ಗಿರುವ ದರೋಡೆಕೋರರು ದಂಪತಿಯ ಬಾಯಿಗೆ ಬಟ್ಟೆ ತುರುಕಿ, ಕೈ-ಕಾಲು ಕಟ್ಟಿ ಹಾಕಿ, ವೃದ್ಧೆಯ ಮೈ ಮೇಲಿದ್ದ ಬಂಗಾರದ ಆಭರಣಗಳು ಸೇರಿದಂತೆ ಬೀರುವಿನಲ್ಲಿದ್ದ ಇತರೆ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.