ವಿಜಯಪುರ ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶದಿಂದ ನಡೆದ ದುರ್ಘಟನೆಯಲ್ಲಿ ಮೃತಪಟ್ಟ ಡೋಬಲೆ ಗಲ್ಲಿಯ ಯುವಕ ಶುಭಂ ಸಂಕಪಾಳ ಅವರ ಮನೆಗೆ ಹಾಗೂ ಗಾಯಗೊಂಡ ಯುವಕರ ಮನೆಗಳಿಗೆ ಶನಿವಾರ ಮಧ್ಯಾಹ್ನ 1ಗಂಟೆ ಸುಮಾರಿಗೆ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ನೀಡಿ ಸಾಂತ್ವನ ಹೇಳಿದರು. ಮೃತಪಟ್ಟ ಯುವಕನ ಸಹೋದರಿಗೆ ಸಿದ್ದಸಿರಿ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಕಿರಿಯ ಅಧಿಕಾರಿ ಹುದ್ದೆಗೆ ನೇಮಕಾತಿ ಮಾಡಿಕೊಂಡು ಅವರ ಕುಟುಂಬದ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು. ಗಾಯಗೊಂಡ ಯುವಕರಿಗೆ JSS ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವುದಾಗಿ ಹೇಳಿದರು.