ಹನೂರು :ತಾಲೂಕಿನ ಮಲೆಮಹದೇಶ್ವರಬೆಟ್ಟ ಮಹದೇಶ್ವರಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಮಾಡುವ ಅವಕಾಶವನ್ನು ಸ್ಥಳೀಯ ಬೇಡಗಂಪಣ ಸಮುದಾಯಕ್ಕೆ ಮಾತ್ರ ಕಲ್ಪಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹಾಗೂ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಕುರಿತಂತೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜು ಸ್ವಾಮಿ ಎಂಬುವರು ಸಲ್ಲಿಸಿದ್ದ ತಕರಾರು ಅರ್ಜಿ, ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಮೂರ್ತಿಗಳು, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಕಂ ಇಲಾಖೆ ಕಾರ್ಯದರ್ಶಿ, ಚಾಮರಾಜನಗರದ ಮುಜರಾಯಿ ಮತ್ತು ಹಿಂದು ಧಾರ್ಮಿಕ ದತ್ತಿ ಇಲಾಖೆಗೆ ನೋಟಿಸ್ ನೀಡಿದೆ