ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ, ಚರಂಡಿ, ರಾಜಕಾಲುವೆ, ತಡೆಗೋಡೆಗಳು ಹಾಳಾಗಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಇವೆಲ್ಲದರ ಪುನರ್ ನಿರ್ಮಾಣಕ್ಕಾಗಿ ತುರ್ತು ಕಾಮಗಾರಿ ಅಗತ್ಯವಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು.