ಇತ್ತೀಚೆಗೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ರವರ ಏಕ ಸದಸ್ಯ ಆಯೋಗ ಸಲ್ಲಿಸಿದ ಒಳ ಮೀಸಲಾತಿ ವರದಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಒಪ್ಪಿಗೆ ನೀಡಿದ್ದು, ಇದು ರಾಜ್ಯದ ನೊಂದ ಪರಿಶಿಷ್ಟ ಜಾತಿಗೆ ಉಸಿರು ಕೊಟ್ಟಂತಾಗಿದೆ ಎಂದು ಶಿವಮೊಗ್ಗ ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್ ಶಿವಣ್ಣ ಹೇಳಿದ್ದಾರೆ.