ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಜಮೀನುಗಳಿಗೆ ಶಾಸಕ ಬಸವರಾಜ ಮತ್ತಿಮಡು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರಿಂದ ಬೆಳೆ ಹಾನಿ ಕುರಿತು ಮಾಹಿತಿ ಸಂಗ್ರಹಿಸಿದ ಶಾಸಕರು, ಕೃಷಿ, ಕಂದಾಯ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸಮಗ್ರ ಸಮೀಕ್ಷೆ ನಡೆಸಿ, ವರದಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು. ಸರ್ಕಾರದಿಂದ ರೈತರಿಗೆ ಸಮರ್ಪಕ ಪರಿಹಾರ ಮತ್ತು ವಿಮೆ ಹಣ ಒದಗಿಸಲಾಗುವುದು ಎಂಬ ಭರವಸೆ ನೀಡಿದ ಶಾಸಕರು, ಸಮೀಕ್ಷೆ ವೇಳೆ ರೈತರು ಸಹಕರಿಸುವಂತೆ ಮನವಿ ಮಾಡಿದರು. ಮಂಗಳವಾರ 4 ಗಂಟೆಗೆ ಮಹಾಗಾಂವ ಸೇರಿ ಇತರೆ ಗ್ರಾಮಗಳಿಗೆ ಭೇಟಿ ನೀಡಿದರು....