ಕಾರವಾರ ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಆವರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಗುರುವಾರ ಮಧ್ಯಾಹ್ನ 12ಕ್ಕೆ ನಡೆಯಿತು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್ ಹಾಗೂ ಇನ್ನಿತರರು ಇದ್ದರು