ಕಲಬುರಗಿ : ಆಗಷ್ಟ್ 26 ರಂದು ನಾಡಿನೆಲ್ಲೆಡೆ ಶ್ರೀ ವೀರಭದ್ರೇಶ್ವರ ಸ್ವಾಮೀಜಿ ಜಯಂತ್ಯೋತ್ಸವ ಅದ್ದೂರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಗೌರವಾಧ್ಯಕ್ಷರಾದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.. ಆ23 ರಂದು ಮಧ್ಯಾನ 12 ಗಂಟೆಗೆ ನಗರದಲ್ಲಿ ಮಾತನಾಡಿದ ಅವರು, ಪ್ರತಿವರ್ಷ ಕೂಡ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ ಆಚರಿಸುತ್ತ ಬಂದಿದ್ದು, ಈ ಬಾರಿಯೂ ಅನೇಕ ಮಠಾಧೀಶರು ಮತ್ತು ಭಕ್ತರನ್ನ ಒಳಗೊಂಡಂತೆ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತದೆ ಎಂದು ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ