ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಹಯೋಗದಲ್ಲಿ ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳು ನಗರದ ಕೆ. ಎಚ್ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದವು. ಜಿಲ್ಲಾಧಿಕಾರಿ ಸಿ. ಎನ್ ಶ್ರೀಧರ್ ಅವರು ಕ್ರೀಡಾದ್ವಜ ನೇರವೇರಿಸಿದರು. ಕ್ರೀಡಾಜ್ಯೋತಿಯನ್ನು ಸ್ವೀಕರಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಈ ವೇಳೆ ಕ್ರೀಡಾ ಇಲಾಖೆ ಅಧಿಕಾರಿ ಡಾ. ಶರಣು ಗೋಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.