ನಾಡ ಹಬ್ಬ ದಸರಾ ಆಯುಧ ಪೂಜೆ ಪ್ರಯುಕ್ತ ಬೆಂಗಳೂರು ಕೇಂದ್ರೀಯ ವಿಭಾಗದ ಕೆಎಸ್‌ಆರ್‌ಟಿಸಿಯ ಘಟಕ 2 ರಲ್ಲಿ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು. ಅಕ್ಟೋಬರ್ 1ರಂದು ಬೆಳಿಗ್ಗೆ 11 ಗಂಟೆಗೆ ಪೂಜೆ ಸಲ್ಲಿಸಿ, ಸಂಸ್ಥೆಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸಲಾಯಿತು.ಈ ಸಂದರ್ಭದಲ್ಲಿ ಕೇಂದ್ರ ಕಚೇರಿಯಿಂದ ಮುಖ್ಯ ಸಂಚಾರ ವ್ಯವಸ್ಥಾಪಕರು ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಬೆಂಗಳೂರು ಕೇಂದ್ರೀಯ ವಿಭಾಗದ ಸಿಬ್ಬಂದಿಗಳಿಗೆ ಸಿಹಿ ವಿತರಿಸಿ ಶುಭ ಕೋರಿದರು. ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದೇ ವೇಳೆ ಉಪಸ್ಥಿತರಿದ್ದರು.