ಉದ್ಯೋಗ ಖಾತ್ರಿ ಸ್ವಚ್ಛ ಭಾರತ್ ಮಿಷನ್ ಯೋಜನೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕೆಲಸಗಳನ್ನು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಕ ಅಧಿಕಾರಿ ಮಾಣಿಕರಾವ ಪಾಟೀಲ್ ಎಚ್ಚರಿಸಿದರು.ಬೀದರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾನ 2 :15ಕ್ಕೆ ಉದ್ಯೋಗ ಖಾತ್ರಿ, ಸ್ವಚ್ಛ ಭಾರತ್ ಮಿಷನ್ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದರು.