ಸಾಲಬಾಧೆ ತಾಳಲಾರದೇ ರೈತರೊಬ್ಬರು ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡಗಿ ತಾಲೂಕ ಚಿಕ್ಕಬಾಸೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹೇಶ ಫಕ್ಕೀರಪ್ಪ ಹುಳ್ಳೆರ (37) ಆತ್ಮಹತ್ಯೆ ಮಾಡಿಕೊಂಡ ರೈತ. ಕೆವಿಜಿ ಬ್ಯಾಂಕ್ ಹಾಗೂ ಕೈಗಡವಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಅತಿವೃಷ್ಟಿ ಅನಾವೃಷ್ಟಿ ಮಳೆಗೆ ಬೆಳೆ ಸರಿಯಾಗಿ ಬಾರದೆ ಮನನೊಂದು ನೇಣಿಗೆ ಶರಣಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.