ವಿಜಯಪುರ ಜಿಲ್ಲೆಯ ತಾಳಿಕೋಟಿಯ ಸಮುದಾಯ ಆರೋಗ್ಯ ಕೇಂದ್ರದ ಮೇಲ್ಚಾವಣಿ ಸಂಪೂರ್ಣವಾಗಿ ಮಳೆಯಿಂದಾಗಿ ಸೋರಿಕೆಯಾಗುತ್ತಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದರಿಂದ ರೋಗಿಗಳು ಚಿಕಿತ್ಸೆಗಾಗಿ ಪರದಾಟ ನಡೆಸಿದ್ದಾರೆ. ಆರೋಗ್ಯ ಕೇಂದ್ರದ ಹಾಸಿಗೆಗಳ ಮೇಲೆ ಮಳೆ ನೀರು ಸೋರಿಕೆಯಾಗುತ್ತಿದ್ದರಿಂದ ಹಾಸಿಗೆಗಳು ಒದ್ದೆಯಾಗುತ್ತಿದ್ದು, ರೋಗಿಗಳು ಚಿಕಿತ್ಸ ಪಡೆಯದೆ ಮರಳಿ ಮನೆಗೆ ಹೋಗುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಹರಿಸಿ ಆರೋಗ್ಯದ ಕೇಂದ್ರದ ಮೇಲ್ಚಾವಣೆಯನ್ನು ಸರಿಪಡಿಸಿ ರೋಗಿಗಳ ಚಿಕಿತ್ಸೆಗೆ ಅನುಕೂಲ ಮಾಡಿಕೊಡಬೇಕು ಎಂದು ರೋಗಿಗಳು ಶನಿವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರು.