ಗುಬ್ಬಿ ತಾಲೂಕಿನ ಮಡೇನಹಳ್ಳಿ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗೆ ಒಂದೂವರೆ ವರ್ಷದಿಂದ ಕುಡಿಯುವ ನೀರಿನ ಸೌಲಭ್ಯ ಒದಗಿಸಿದೆ ಸ್ಥಳೀಯ ಆಡಳಿತ ಜನರನ್ನ ಶೋಷಣೆ ಮಾಡುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.ಮಡೇನಹಳ್ಳಿ ಗ್ರಾಮದಲ್ಲಿ ಜನರು ಬುಧವಾರ ಸಂಜೆ 5.30 ರ ಸಮಯದಲ್ಲಿ ಮಾಧ್ಯಮದವರೊಂದಿಗೆ ತಮ್ಮ ಸಮಸ್ಯೆಗಳನ್ನ ತಿಳಿಸಿದರು ಗುಬ್ಬಿ ತಾಲೂಕು ಜಿ ಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಮಡೇನಹಳ್ಳಿ ಗ್ರಾಮ ಸೇರಿದೆ.ಗ್ರಾಮ ಪಂಚಾಯಿತಿ ಕಚೇರಿಗೆ ಹಲವು ಬಾರಿ ಅರ್ಜಿಯನ್ನು ಕೊಟ್ಟು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರರೂ, ಕನಿಷ್ಠ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಗ್ರಾಮ ಪಂಚಾಯಿತಿ ವಿಫಲವಾಗಿದೆ ಎಂದು ಆರೋಪಿಸಿದ್ರು.