ಕಲಬುರಗಿ : 2025/26 ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಹಾಳಾದ ತೊಗರಿ, ಉದ್ದು, ಸೋಯಾ, ಹೆಸರು, ಹತ್ತಿ ಮತ್ತು ಇನ್ನಿತರ ಬೆಳೆಗಳನ್ನ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಸಮೀಕ್ಷೆ ನಡೆಸಿ ಎನ್‌ಡಿಆರ್‌ಎಫ್ ಅಡಿ ಪರಿಹಾರ ನೀಡುವುದು ಮತ್ತು ಬಾಕಿಯಿರೋ 314 ಕೋಟಿ ತೊಗರಿ ವಿಮೆ ಹಣ ತಕ್ಷಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕಲಬುರಗಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸಿದ್ದಾರೆ.. ಆ28 ರಂದು ಮಧ್ಯಾನ 12 ಗಂಟೆಗೆ ನಗರದ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ, 2025/26 ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಹಾಳಾದ ಬೆಳೆಗಳಿಗೆ ತಕ್ಷಣ ಪರಿಹಾರ ನೀಡುವುದು ಮತ್ತು ಬಾಕಿಯಿರೋ 314 ಕೋಟಿ ರೂಪಾಯಿ ವಿಮೆ ಹಣ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.