ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉಪಯುಕ್ತ ಸೇವೆಗಳಲ್ಲಿ ಸಾರ್ವಜನಿಕರಿಗೆ ಆಗುವ ನಷ್ಟದ ಪ್ರಕರಣಗಳನ್ನ ಖಾಯಂ ಜನತಾ ನ್ಯಾಯಾಲಯದಲ್ಲಿ ಉಚಿತವಾಗಿ ದೂರು ನೀಡುವ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.ಈ ಬಗ್ಗೆ ತುಮಕೂರು ನಗರದ ಜಿಲ್ಲಾ ನ್ಯಾಯಾಲಯದ ಸಂಕಿರ್ಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ಅವರು ಮಾಹಿತಿ ನೀಡಿದರು.ಬುಧವಾರ ಮಧ್ಯಾಹ್ನ 3 ರ ಸಮಯದಲ್ಲಿ ಅವರು ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದರು.ತುಮಕೂರು ಜಿಲ್ಲೆಯ ಪ್ರಕರಣಗಳನ್ನು ಬೆಂಗಳೂರಿನ ಜನತಾ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ ಎಂದರು.