Download Now Banner

This browser does not support the video element.

ಯಾದಗಿರಿ: ಚಾಮನಹಳ್ಳಿ ಗ್ರಾಮದ ಸೇತುವೆ ಮುಳುಗಡೆ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಮುದ್ನಾಳ ಭೇಟಿ,ರೈತರಿಗೆ ಪರಿಹಾರ ನೀಡುವಂತೆ ಒತ್ತಾಯ

Yadgir, Yadgir | Sep 11, 2025
ಬುಧವಾರ ರಾತ್ರಿ ಸುರಿದ ಮಹಾಮಳೆಯಿಂದಾಗಿ ಯಾದಗಿರಿ ತಾಲೂಕಿನ ಚಾಮನಹಳ್ಳಿ, ಬಾಚವಾರ ಯರಗೋಳ ಗ್ರಾಮದ ಸೇತುವೆಗಳು ಮುಳುಗಡೆಯಾಗಿದ್ದು, ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಗುರುವಾರ ಮಧ್ಯಾಹ್ನ ಈ ಸೇತುವೆಗಳಿಗೆ ಸಾಮಾಜಿಕ ಹೋರಾಟಗಾರ ಉಮೇಶ ಮುದ್ನಾಳ ಭೇಟಿ ನೀಡಿ ಜಿಟಿ ಜಿಟಿ ಮಳೆಯಲ್ಲಿಯೇ ಜಮೀನುಗಳಲ್ಲಿನ ನೀರಲ್ಲಿ ನಿಂತು ಸಾಂಕೇತಿಕ ಪ್ರತಿಭಟನೆ ನಡೆಸಿ ಬೆಳೆ ಹಾನಿಯಾದ ರೈತರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಸೇತುವೆಗಳನ್ನು ಮೇಲ್ದರ್ಜೆಗೇರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಜನ ರೈತರು ಕೂಡ ಭಾಗವಹಿಸಿದ್ದರು.
Read More News
T & CPrivacy PolicyContact Us