ಧರ್ಮಸ್ಥಳದಲ್ಲಿ ಶವಹೂತಿಟ್ಟ ಆರೋಪ ಪ್ರಕರಣದ ವಿಚಾರವಾಗಿ ಧರ್ಮಸ್ಥಳ ಪರವಾಗಿ ವಿಜಯಪುರದಲ್ಲಿ ಬಿಜೆಪಿ ನಗರ ಮಂಡಳ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿ ಅನೇಕ ಮುಖಂಡರು ಭಾಗಿಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರಕೂಗಿ ಆಕ್ರೋಶ ಹೊರ ಹಾಕಿದರು. ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರ ಎಂದು ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು