ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಅಂಬೇಡ್ಕರ್ ಭವನದ ಮೇಲ್ಚಾವಣಿ ಕುಸಿದು ಕೆಳಗೆ ಬಿದ್ದು ಐದು ಜನ ಯುವಕರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಪಟ್ಟಣದಲ್ಲಿ ಟ್ರ್ಯಾಕ್ಟರ್ ಜಗ್ಗುವ ಸ್ಪರ್ಧೆಯನ್ನು ವೀಕ್ಷಿಸಲು ಆಗಮಿಸಿದ ಯುವಕರು ನಿಂತು ವೀಕ್ಷಣೆ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಮೇಲ್ಚಾವಣಿ ಕುಸಿದು ಬಿದ್ದು ಐದು ಜನರಿಗೆ ಗಂಭೀರ ಗಾಯವಾಗಿದೆ. ವಸಂತ ರಾಥೋಡ್ ಅಶೋಕ ನಿಂಗಪ್ಪ ಅಲಿ ಹಾಜಿ ಸಾಬ್ ಮುಲ್ಲಾ ಆಸಿಫ್ ಭಗವಾನ್ ಮತ್ತು ಲಕ್ಷ್ಮಣ್ ರಾಥೋಡ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಶುಕ್ರವಾರ ರಾತ್ರಿ 8ಗಂಟೆ ಸುಮಾರಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.