ಹಾಸನ: ಸಂಸದ ಶ್ರೇಯಸ್ ಪಟೇಲ್ ವಿರುದ್ಧ ಚುನಾವಣಾ ವೇಳೆ ಆಸ್ತಿ ವಿವರಗಳನ್ನು ಮುಚ್ಚಿಟ್ಟ ಆರೋಪದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಂಸದರ ಕಚೇರಿಗೆ ನೋಟಿಸ್ ಅಂಟಿಸಲಾಗಿದೆ. ಡಿಸಿ ಕಚೇರಿ ಕಟ್ಟಡದಲ್ಲಿರುವ ಸಂಸದರ ಕಚೇರಿಗೆ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ವಕೀಲ ಪೂರ್ಣಚಂದ್ರ ತೇಜಸ್ವಿ ನೋಟಿಸ್ ಅಂಟಿಸಿದರು. ಅವರು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಚುನಾವಣಾ ಏಜೆಂಟ್ ಆಗಿದ್ದರು. ಅಕ್ಟೋಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವ ನೋಟಿಸ್, ಶ್ರೇಯಸ್ ಪಟೇಲ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದೆ.