ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಮಳೆಯಿಂದ ಹಾನಿಯಾದ ರೈತರ ಜಮೀನುಗಳಿಗೆ ಗುರುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿಗಳು ಭೇಟಿ ನೀಡಿದರು. ಅತಿವೃಷ್ಟಿ ಮಳೆಯಿಂದ ರೈತರ ತೊಗರಿ ಬೆಳೆಯುವ ಸಂಪೂರ್ಣವಾಗಿ ಹಾಳಾಗಿದೆ. ಹೀಗಾಗಿ ಕೂಡಲೇ ರಾಜ್ಯ ಸರ್ಕಾರ ರೈತರ ಗಳಿಗೆ ಪರಿಹಾರ ನೀಡುವ ಕೆಲಸ ಮಾಡಬೇಕು ಎಂದು ಮಾಜಿ ಶಾಸಕ ರಮೇಶ ಭೂಸನೂರ್ ಆಗ್ರಹಿಸಿದರು. ಸಂಕಷ್ಟಕ್ಕೆ ಸಿಲುಕಿದ ರೈತರಗಳ ನೆರವಿಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.