Download Now Banner

This browser does not support the video element.

ಬೀದರ್: ಮಳೆಯಿಂದ ಬೆಳೆ ಹಾನಿ, ಹೆಕ್ಟೆರ್ ಗೆ 50 ಸಾವಿರ ಪರಿಹಾರ ನೀಡಿ, ನಗರದಲ್ಲಿ ಸಿಎಂಗೆ ಕರವೇ ಮನವಿ

Bidar, Bidar | Sep 1, 2025
ಬೀದರ್: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಹೆಕ್ಟೇರ್‍ಗೆ ರೂ. 50 ಸಾವಿರ ಪರಿಹಾರ ಒದಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕ ಆಗ್ರಹಿಸಿದೆ. ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ನಿಯೋಗದಲ್ಲಿ ಈ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು. ಭಾರಿ ಮಳೆಯಿಂದ ಸಂಪೂರ್ಣ ಬೆಳೆ ನಾಶವಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಹೇಳಿದರು.
Read More News
T & CPrivacy PolicyContact Us