ರಾಜ್ಯದಲ್ಲಿ ಅಭಿವೃದ್ಧಿ ಜೊತೆಗೆ ಗ್ಯಾರೆಂಟಿ ಯೋಜನೆಗಳು ನಡೆಯುತ್ತವೆ ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಹೇಳಿದರು. ತಾಲ್ಲೂಕಿನ ನನ್ನಿವಾಳ ಗ್ರಾಮದಲ್ಲಿ ಗುರುವಾರ 52 ಲಕ್ಷ ರೂ. ವೆಚ್ಚದಲ್ಲಿ ಗ್ರಾಪಂ ನೂತನ ಕಟ್ಟಡ ಸೇರಿ ಇತರೆ ಪೂರ್ಣಗೊಂಡ ಕಾಮಗಾರಿಗಳು ಉದ್ಘಾಟಿಸಿ ಮಾತನಾಡಿದರು. ನನ್ನಿವಾಳ ಗ್ರಾಮದಲ್ಲಿ ಎಲ್ಲ ಜನಪ್ರತಿನಿಧಿಗಳ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳು ಮಾಡಲಾಗಿದೆ ಎಂದರು. ಈ ವೇಳೆ ಗ್ರಾಪಂ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷೆ ಬೀಬಿಜಾನ್, ತಹಶೀಲ್ದಾರ್ ರೇಹಾನ್ ಪಾಷಾ, ತಾಪಂ ಇಓ ಶಶಿಧರ್ ಇದ್ದರು.